ಉಜಿರೆ : ಸ್ವಯಂಪ್ರೇರಿತ ರಕ್ತದಾನ ಶಿಬಿರ

ujire rakthadana shibiraಉಜಿರೆ : ಇಲ್ಲಿನ ಉಜಿರೆ ಗ್ರಾಮ ಪಂಚಾಯತಿಯಲ್ಲಿ ಕರ್ನಾಟಕ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾಧಿಕಾರಿಗಳು ಮತ್ತು ನೌಕರರ ಸಂಘ, ಬೆಳ್ತಂಗಡಿ ತಾ. ಗ್ರಾಮ ಪಂಚಾಯತು ಸದಸ್ಯರ ಒಕ್ಕೂಟ ಬೆಳ್ತಂಗಡಿ ತಾ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ ಜಿಲ್ಲೆ ಹಾಗೂ ಗ್ರಾಮ ಪಂಚಾಯತ್ ಉಜಿರೆ ಇವುಗಳ ಸಂಯುಕ್ತ ಅಶ್ರಯದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉಜಿರೆ ಗ್ರಾ.ಪಂ.ನ ಸುವರ್ಣ ಸೌಧದಲ್ಲಿ ಜೂ. 10ರಂದು ನಡೆಯಿತು.
ಬೆಳ್ತಂಗಡಿ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಸಿ.ಆರ್ ನರೇಂದ್ರರವರು ಶಿಬಿರವನ್ನು ಉದ್ಘಾಟಿಸಿದರು. ಗ್ರಾಮ ಪಂಚಾಯತು ಅಧ್ಯಕ್ಷ ಕೆ ಶ್ರೀಧರ ಪೂಜಾರಿಯವರು ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ ಇಂತಹ ಶಿಬಿರಗಳಿಂದ ಸಮಾಜಸೇವೆಯನ್ನು ಮಾಡುವ ಅವಕಾಶ ಸಿಗುತ್ತದೆ ಹಾಗೂ ಈ ಅವಕಾಶವನ್ನು ಬಳಸಿಕೊಂಡಲ್ಲಿ ಸತ್ಕಾರ್ಯ ಮಾಡಿದ ಸಾರ್ಥಕತೆ ನಮಗೆ ಲಭಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ವಿನುತ ರಜತ್ ಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾಧಿಕಾರಿಗಳು ಮತ್ತು ನೌಕರರ ಸಂಘ, ದ.ಕ ಜಿಲ್ಲೆಯ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ತಾಲೂಕು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖಾಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷ ನಿಡ್ಲೆ ಪಂಚಾಯತು ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಉಜಿರೆ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಗ್ರಾಮ ಪಂಚಾಯತಿ ಸದಸ್ಯ ಬಾಲಕೃಷ್ಣ ಗೌಡ, ಗ್ರಾ.ಪಂ ಸದಸ್ಯರು, ಗ್ರಾ.ಪಂ ನೌಕರರ ಸಂಘದ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ, ವಿವಿಧ ಗ್ರಾಮ ಪಂಚಾಯತ್‌ಗಳ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕಸಹಾಯಕರು, ನೌಕರರು, ವೆನ್ಲಾಕ್ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಬ್ಲಡ್ ಬ್ಯಾಂಕ್ ಸಿಬ್ಬಂದಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. ತಾಲೂಕು ಪಂಚಾಯತ್ ಸಂಯೋಜಕ ಜಯಾನಂದರವರು ಕಾರ್ಯಕ್ರಮ ನಿರೂಪಿಸಿ, ಉಜಿರೆ ಗ್ರಾಮ ಪಂಚಾಯತು ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ. ಸ್ವಾಗತಿಸಿ ಮುಂಡಾಜೆ ಅಭಿವೃದ್ಧಿ ಅಧಿಕಾರಿ ಸಂಜೀವ ನಾಕ ವಂದನಾರ್ಪಣೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.