ಕುಲಾಲ-ಕುಂಬಾರ ಯುವ ವೇದಿಕೆ ಸಭೆ ತಾ| ಮಟ್ಟದ ಬೃಹತ್ ಹಕ್ಕೋತ್ತಾಯ ಸಮಾವೇಶಕ್ಕೆ ನಿರ್ಧಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Kulala kumbara samaveshaಗುರುವಾಯನಕೆರೆ : ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಹಾಗೂ ಬೆಳ್ತಂಗಡಿ ತಾಲೂಕು ಕುಲಾಲ ಕುಂಬಾರರ ಯುವ ವೇದಿಕೆ ಇದರ ಜಂಟಿ ಆಶ್ರಯದಲ್ಲಿ ಸಮಾಲೋಚನಾ ಸಭೆಯು ಜೂ.25ರಂದು ಗುರುವಾಯ ನಕೆರೆ ಕುಲಾಲ ಮಂದಿರದಲ್ಲಿ ಜರುಗಿತು.
ಸಭೆಯಲ್ಲಿ ಮುಂದಿನ ಅಕ್ಟೋಬರ್/ನವಂಬರ್ ತಿಂಗಳಲ್ಲಿ ಬೆಳ್ತಂಗಡಿಯಲ್ಲಿ ತಾಲೂಕು ಮಟ್ಟದ ಕುಲಾಲ-ಕುಂಬಾರ ಸಮುದಾಯದ “ಬೃಹತ್ ಹಕ್ಕೋತ್ತಾಯ ಸಮಾವೇಶ” ನಡೆಸುವ ಬಗ್ಗೆ ನಿರ್ಧರಿಸಲಾಯಿತು. ಸಮಾವೇಶದ ಯಶಸ್ವಿಗೆ ಬೇಕಾದ ಪೂರ್ವ ತಯಾರಿ ಮತ್ತು ಗ್ರಾಮ ಮಟ್ಟದಲ್ಲಿ ಸಮಿತಿಗಳನ್ನು ಬಲಪಡಿ ಸುವ ನಿಟ್ಟಿನಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಮಾವೇಶದ ಯಶಸ್ವಿಗೆ ತಾಲೂಕು ಮಟ್ಟದ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ಪದ್ಮಮೂಲ್ಯ ಅನಿಲಡೆ, ಗೌರವ ಸಲಹೆಗಾರರಾಗಿ ರಾಜ್ಯ ಕುಂಬಾರರ ಮಹಾ ಸಂಘದ ಸಂಘಟನಾ ಕಾರ್ಯದರ್ಶಿ ಹೆಚ್. ಪದ್ಮಕುಮಾರ್ ಬೆಳ್ತಂಗಡಿ ಮತ್ತು ಕುಲಾಲ ಕುಂಬಾರರ ಯುವ ವೇದಿಕೆ ಅಧ್ಯಕ್ಷ ಲೋಕೇಶ್ ಕುಲಾಲ್ ಗುರುವಾಯನಕೆರೆ, ಅಧ್ಯಕ್ಷರಾಗಿ ಕುಲಾಲ ಕುಂಬಾರರ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಲ| ಹರೀಶ್ ಕಾರಿಂಜ, ಪ್ರಧಾನ ಕಾರ್ಯದರ್ಶಿಗಳಾಗಿ ಪುಷ್ಪರಾಜ್ ಲಾಯಿಲ ಇವರನ್ನು ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಮಿತಿ ಉಪಾಧ್ಯಕ್ಷರು, ಜೊತೆ ಕಾರ್ಯದರ್ಶಿಗಳು, ಸಲಹೆಗಾರರು ಸೇರಿದಂತೆ ಸಮಿತಿಗೆ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಮುಂದುವರಿದಿದೆ. ಕಾರ್ಯಕಾರಿ ಸಮಿತಿಗೆ ಜಿಲ್ಲಾ ಪಂಚಾಯತು ಮಟ್ಟದಲ್ಲಿ, ಗ್ರಾಮ ಮಟ್ಟದಲ್ಲಿ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು. ಪ್ರತಿ ಗ್ರಾಮದಲ್ಲಿ ಗ್ರಾಮ ಸಮಿತಿ ನೇತೃತ್ವದಲ್ಲಿ ಸಭೆ ನಡೆಸಿ ಸಮಾವೇಶದ ಯಶಸ್ವಿಗೆ ಕಾರ್ಯ ಯೋಜನೆ ರೂಪಿಸಲು ನಿರ್ಧರಿಸಲಾಯಿತು. ಅಧ್ಯಕ್ಷ ಹರೀಶ್ ಕಾರಿಂಜ ಮಾತನಾಡಿ ಸಮಾಜದ ಅಭಿವೃದ್ಧಿ ಹಾಗೂ ಸಂಘಟನೆಗಾಗಿ ತಾಲೂಕು ಮಟ್ಟದಲ್ಲಿ ನಡೆಯುವ ಈ ಸಮಾವೇಶದ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು. ಯುವ ವೇದಿಕೆ ಹಾಗೂ ತಾಲೂಕು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕುಲಾಲ ಕುಂಬಾರರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ದಿನಕರ ಕುಲಾಲ್ ಕುಂಡದಬೆಟ್ಟು ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.