ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

vaniಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜಿನ 2017-18ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇಂದು(ಜು.11) ಸಿ.ವಿ.ಸಿ ಹಾಲ್ ಬೆಳ್ತಂಗಡಿಯಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ನೆರವೇರಿಸಿದರು. ಅಧ್ಯಕ್ಷತೆಯನ್ನು ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಜಿ. ಸೋಮೇ ಗೌಡ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್ ಬಿ. ಸುವರ್ಣ, ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಮೋಹನ ಗೌಡ ಭಾಗವಹಿಸಿದ್ದರು.
ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಂಜುನಾಥ ಮಾಲಣ್ಣವರ್, ಉಪಾಧ್ಯಕ್ಷೆ ಕು| ಪ್ರಣಮ್ಯ, ಕಾರ್ಯದರ್ಶಿ ಯೋಗೀಶ್, ಜೊತೆ ಕಾರ್ಯದರ್ಶಿ ಹೇಮಂತ್, ಕ್ರೀಡಾ ಕಾರ್ಯದರ್ಶಿ ಗೋಪಾಲಕೃಷ್ಣ, ಸಾಂಸ್ಕೃತಿಕ ಕಾರ್ಯದರ್ಶಿ ಜಿತಿನ್ ಜಿಜೋ, ವಿದ್ಯಾರ್ಥಿ ಕ್ಷೇಮಪಾಲನಾ ಕಾರ್ಯದರ್ಶಿ ಕು| ಅಭಿಗೈಲ್ ರಿಚರ್ಡ್ ಪಿರೇರಾ ಉಪಸ್ಥಿತರಿದ್ದರು. ಪ್ರಾಂಶುಪಾಲ ಡಿ. ಯದುಪತಿ ಗೌಡ ಸ್ವಾಗತಿಸಿ, ಪ್ರಸ್ತಾವಣೆ ಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.