ನಿವೃತ್ತ ಶಿಕ್ಷಕಿ ಫಿಲೋಮಿನಾ ಫೆರ್ನಾಂಡೀಸ್‌ರಿಗೆ ಬೀಳ್ಕೊಡುಗೆ ಉಪಕಾರಕ್ಕೆ ಕೃತಜ್ಞತೆ ಉತ್ತಮ ಸಂಸ್ಕೃತಿ: ಸಿ| ಲಿಲ್ಲಿ ಪಿಂಟೊ

st teresa sendoffಬೆಳ್ತಂಗಡಿ : ಸಂತ ತೆರೇಸಾ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಸುಮಾರು 39 ವರ್ಷಗಳ ಕಾಲ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಶ್ರೀಮತಿ ಫಿಲೋಮಿನಾ ಫೆರ್ನಾಂಡಿಸ್ ಇವರ ವಿದಾಯ ಸಮಾರಂಭವು ಜು.8ರಂದು ಸಿ.ವಿ.ವಿ. ಹಾಲ್ ಬೆಳ್ತಂಗಡಿಯಲ್ಲಿ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಅರ್ಸುಲಾಯ್ನ್ ಫ್ರಾನ್ಸಿಸ್ಕನ್ ವಿದ್ಯಾಸಂಸ್ಥೆ ದೇರಳಕಟ್ಟೆಯ ಕಾರ್ಯದರ್ಶಿ ವಂದನೀಯ ಧರ್ಮ ಭಗಿನಿ ಲಿಲ್ಲಿ ಪಿಂಟೋ ಅವರು ಮಾತನಾಡಿ, ನಮಗೆ ಉಪಕಾರ ಮಾಡಿದವರಿಗೆ ಕೃತಜ್ಞತೆ ಸಲ್ಲಿಸುವುದು ಉತ್ತಮ ಸಂಸ್ಕೃತಿಯಾಗಿದೆ ವಿದ್ಯಾರ್ಥಿ ಗಳು ಈ ಗುಣಗಳನ್ನು ಬೆಳೆಸಿಕೊಳ್ಳಬೇಕು. ಮಕ್ಕಳನ್ನು ತಿದ್ದಿ, ಮೌಲ್ಯಗಳನ್ನು ಬೆಳೆಸಿ ಉತ್ತಮ ನಾಗರಿಕರಾಗಿ ರೂಪಿಸುವ ಮಹತ್ವವಾದ ಕೆಲಸವನ್ನು ಶಿಕ್ಷಕರು ಮಾಡುತ್ತಾರೆ. ಆಟದ ಅಂಗಳದಲ್ಲಿ ರೂಪಿತವಾದ ಶಿಸ್ತನ್ನು ಮಕ್ಕಳು ತಮ್ಮ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನ ವಂದನೀಯ ಧರ್ಮಗುರು ಬೊನವೆಂಚರ್ ನಜ್ರೆತ್ ಅವರು ಮಾತನಾಡಿ ನಮ್ಮ ಜೀವನದಲ್ಲಿ ಶಿಸ್ತು, ಶ್ರದ್ಧೆ, ಬುದ್ದಿವಂತಿಕೆಯನ್ನು ನಾವು ಶಾಲೆಯಿಂದ ಕಲಿಯುತ್ತೇವೆ. ವಿದ್ಯಾರ್ಥಿಗಳು ಪಾಠ, ಪ್ರವಚನದ ಜೊತೆಗೆ ಉತ್ತಮ ಗುಣ, ನಡತೆಯನ್ನು ರೂಪಿಸಿಕೊಂಡು ಜೀವನದಲ್ಲಿ ಉನ್ನತ ಸಾಧನೆಯನ್ನು ಮಾಡಬೇಕು. ಶಿಕ್ಷಕಿ ಫಿಲೋಮಿನ ಅವರು ಪ್ರೀತಿ, ಮಮತೆ, ದೀನತೆಯಿಂದ ಬಾಳಿ ಎಲ್ಲರ ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ ಎಂದರು.
ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಕಿ ಶ್ರೀಮತಿ ಫಿಲೋಮಿನಾ ಫೆರ್ನಾಂಡಿಸ್ ಅವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು. ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ ಮಾತನಾಡಿದ ಫಿಲೋಮಿನಾ ಫೆರ್ನಾಂಡಿಸ್ ಅವರು ತಮ್ಮ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ವಂದನೆಗಳನ್ನು ಸಲ್ಲಿಸಿದರು. ಮುಖ್ಯ ಅತಿಥಿಗಳಾದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀನಾಥ್ ಮಾತನಾಡಿ ನಿವೃತ್ತ ಶಿಕ್ಷಕಿಗೆ ಶುಭ ಹಾರೈಸಿದರು ವೇದಿಕೆಯಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ರಿಚ್ಚರ್ಡ್ ಗೋವಿಯಸ್, ನಿವೃತ್ತ ಶಿಕ್ಷಕಿ ಫಿಲೋಮಿನಾ ಅವರ ಪತಿ ಲಿಯೋ ವೇಗಸ್ ಉಪಸ್ಥಿತರಿದ್ದರು. ಶಿಕ್ಷಕರ ಪರವಾಗಿ ಥಿಯೋಫಿಲಾ ಟೀಚರ್ ಹಾಗೂ ವಿದ್ಯಾರ್ಥಿಗಳ ಪರವಾಗಿ ಶಾಲಾ ನಾಯಕಿ ಅನನ್ಯ ಅನಿಸಿಕೆ ವ್ಯಕ್ತಪಡಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಸಿ| ಲೀನಾ ಡಿ’ಸೋಜಾ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕಿ ಜೆಸ್ವಿ ಪಿಂಟೋ ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕಿ ನಿಶಾ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕ ಮಂಜುನಾಥ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.