ಉಜಿರೆಯಲ್ಲಿ ಲಕ್ಷಾರ್ಚನೆ – ಪ್ರತಿಭಾ ಪುರಸ್ಕಾರ ಮಾನವೀಯ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡಿ : ಡಾ. ಎಂ.ಎಸ್. ಮೂಡಿತ್ತಾಯ

ujire laksharchane and prathiba puraskaraಉಜಿರೆ : ರ್‍ಯಾಂಕ್ ಗಳಿಕೆಯಿಂದ ಎಲ್ಲವೂ ಆಗುವುದಿಲ್ಲ. ಮಕ್ಕಳು ತಮ್ಮ ಪ್ರತಿಭೆಗಳಲ್ಲಿ ಸಮಾಜ ಹೆಮ್ಮೆ ಪಡುವಂತಹ ಸಾಧನೆ ಮಾಡಬೆಕು. ವಿದ್ಯೆ, ವಿನಯ, ಯೋಗ್ಯತೆಯಿಂದ ಗಳಿಸಿದ ಸಂಪಾದನೆಯನ್ನು ಸತ್ಕಾರ್ಯಗಳಿಗೆ ವಿನಿಯೋಗಿಸುವುದರಿಂದ ಸುಖ, ತೃಪ್ತಿಯಿದೆ. ಮನುಷ್ಯ ಮನುಷ್ಯ ನಡುವಿನ ಮಾನವೀಯ ಸಂಬಂಧಗಳಿಗೆ ಹೆಚ್ಚು ಬೆಲೆ ಕೊಡಬೇಕು ಎಂದು ನಿಟ್ಟೆ ವಿ.ವಿ. ರಿಜಿಸ್ಟ್ರಾರ್ ಡಾ. ಎಂ.ಎಸ್. ಮೂಡಿತ್ತಾಯ ಹೇಳಿದರು.
ಅವರು ಸೆ. 17ರಂದು ಉಜಿರೆ ಶ್ರೀ ರಾಮಕೃಷ್ಣ ಸಭಾ ಮಂಟಪದಲ್ಲಿ ಬೆಳ್ತಂಗಡಿ ತಾಲೂಕು ತುಳು ಶಿವಳ್ಳಿ ಸಭಾ (ರಿ.) ವತಿಯಿಂದ ನಡೆದ ಲಕ್ಷ ತುಳಸಿ ಅರ್ಚನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ತಾಲೂಕಿನ ಸಮಾಜದ ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಹಾಗೂ ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಿ ಮಾತನಾಡುತ್ತಿದ್ದರು.
ಗೌರವಾಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಇತರರಿಗೆ ಆದರ್ಶ ಪ್ರೇರಣೆಯಾಗಿದೆ. ಪ್ರತಿಭೆಗಳು ಹೆಚ್ಚಿನ ಸಾಧನೆ ಮಾಡಿ ಅನುಷ್ಠಾನದಲ್ಲಿ ಮಾತ್ರವಲ್ಲದೆ ಸಂಸ್ಕೃತಿ, ಸಂಸ್ಕಾರವನ್ನು ಉಳಿಸಿ ಸಮಾಜಕ್ಕೆ ತೋರಿಸಿಕೊಡಬೇಕೆಂದರು. ಅಧ್ಯಕ್ಷತೆ ವಹಿಸಿದ್ದ ಬೆಳ್ತಂಗಡಿ ತಾಲೂಕು ಶಿವಳ್ಳಿ ಸಭಾಧ್ಯಕ್ಷ ರಾಘವೇಂದ್ರ ಬೈಪಾಡಿತ್ತಾಯ ಸಮಾಜದ ಮಕ್ಕಳು ತಾಂತ್ರಿಕ, ವೈದ್ಯಕೀಯ ಶಿಕ್ಷಣ ಮುಂದುವರಿಸುತ್ತಿರುವುದಕ್ಕೆ ಹೆಮ್ಮೆ ಪಡಬೇಕು. ಸಮಾಜದ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕೆಂದರು. ಶ್ರೀ ಜನಾರ್ದನ ಸೊಸೈಟಿ ಅಧ್ಯಕ್ಷ ಗಂಗಾಧರ ರಾವ್ ಕೆವುಡೇಲು ಸಂಘದ ವಿದ್ಯಾನಿಧಿಯನ್ನು ಬಲಪಡಿಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ನೀಡಲಾಗುವುದೆಂದರು.
ಕಾರ್ಯದರ್ಶಿ ರಾಜಪ್ರಸಾದ್ ಪೋಳ್ನಾಯ ನೇತ್ರದಾನದ ಬಗ್ಗೆ ಪ್ರಸ್ತಾವಿಸಿದರು. ಶ್ರೀ ತುಳಸಿ ಮಾಸ ಪತ್ರಿಕೆಯ ಗೌರವ ಸಂಪಾದಕ ಶರತ್‌ಕೃಷ್ಣ ಪಡ್ವೆಟ್ನಾಯ ಮುಖ್ಯ ಅತಿಥಿಗಳನ್ನು ಪರಿಚಯಿಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ವಿವರ ಮಂಡಿಸಿದರು. ಮುರಲಿಕೃಷ್ಣ ಆಚಾರ್ ನಿರೂಪಿಸಿದ ಕಾರ್ಯಕ್ರಮದಲ್ಲಿ ಉಜಿರೆ ವಲಯ ಕಾರ್ಯದರ್ಶಿ ಶ್ರೀಧರ ಕೆ.ವಿ. ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.