ಉತ್ತಮ ನಾಯಕತ್ವದಿಂದ ಅತ್ಯುತ್ತಮ ಸಂಘಟನೆ : ಪೀತಾಂಬರ ಹೇರಾಜೆ

Advt_NewsUnder_1
Advt_NewsUnder_1
Advt_NewsUnder_1

jci 4th dayಬೆಳ್ತಂಗಡಿ : ಮಾನವನಲ್ಲಿ ನಾನೇ ಶ್ರೇಷ್ಠ ಎಂಬ ಅಹಂಕಾರ ಒಳ್ಳೆಯದಲ್ಲ. ಎಲ್ಲರೂ ಒಂದಾಗಿ ಒಮ್ಮನಸ್ಸು ಮೂಡಿ ಬದುಕಿದಾಗ ಆರೋಗ್ಯಕರ ಸಮಾಜ ನಿರ್ಮಾಣವಾಗುವುದು. ಎಂದು ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಹೇಳಿದರು.
ಅವರು ಬೆಳ್ತಂಗಡಿ ಮಂಜುಶ್ರೀ ಜೇಸಿಐನ ವತಿಯಿಂದ ಇಲ್ಲಿಯ ಗುರುನಾರಾಯಣ ಸ್ವಾಮಿ ಸಭಾಂಗಣದಲ್ಲಿ ನಡೆದ ಜೇಸಿ ಸಪ್ತಾಹ-2017 ಹೊಂಗನಸು 4ನೇ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಮಂಜುಶ್ರೀ ಜೇಸಿಐ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಅಧ್ಯಕ್ಷತೆಯನ್ನು ವಹಿಸಿ ಸ್ವಾಗತಿಸಿದರು. ಜೇಸಿಐ ವಲಯ 15ರ ಕಾರ್ಯಕ್ರಮ ನಿರ್ದೇಶಕ ಅನಿಲ್ ಕುಮಾರ್, ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಪಿರೇರಾ, ಲಯನ್ಸ್ ಕ್ಲಬ್ ಅಧ್ಯಕ್ಷ ಧರಣೇಂದ್ರ ಕುಮಾರ್ ಜೈನ್, ಕೊಪ್ಪ ವಿಶ್ವಬಂಧು ಟ್ರಸ್ಟ್‌ನ ಅಧ್ಯಕ್ಷ ರಾಘವೇಂದ್ರ ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಮಾತನಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ನಿಕಟ ಪೂರ್ವಾಧ್ಯಕ್ಷರು ವಸಂತ ಶೆಟ್ಟಿ ಶ್ರದ್ಧಾ, ವಲಯಾಧಿಕಾರಿ ಚಿದಾನಂದ ಇಡ್ಯಾ, ಕಾರ್ಯಕ್ರಮ ಸಂಯೋಜಕ ಪ್ರಸಾದ್ ಕಕ್ಕಿಂಜೆ, ಜೇಸಿರೇಟ್ ಅಧ್ಯಕ್ಷೆ ಅಮೃತಾ ಎಸ್ ಕೋಟ್ಯಾನ್, ಜೂನಿಯರ್ ಜೇಸಿ ಅಧ್ಯಕ್ಷ ಮನೋಜ್ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಗೈದ ಡಾ.ಎಂ.ಎನ್.ತುಳುಪುಳೆಯವರಿಗೆ ಸಾಧನಾ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪೂರ್ವಾಧ್ಯಕ್ಷ ಪ್ರಮೋದ್ ನಾಯಕ್ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿ, ಕಾರ್ಯದರ್ಶಿ ರಂಜಿತ್ ಹೆಚ್ .ಡಿ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.