ಗೋವಿಂದೂರು: ಅ.29ರಂದು ಉಚಿತ ನೇತ್ರ ತಪಾಸಣೆ-ಚಿಕಿತ್ಸಾ ಶಿಬಿರ

rajekesari pressmeetಬೆಳ್ತಂಗಡಿ: ರಾಜಕೇಸರಿ ಬೆಳ್ತಂಗಡಿ ಆಶ್ರಯದಲ್ಲಿ ರಾಜಕೇಸರಿ ಗೋವಿಂದೂರು ಹಾಗೂ ಸ.ಉ.ಪ್ರಾ. ಶಾಲೆ ಗೋವಿಂದೂರು ವತಿಯಿಂದ ಉಡುಪಿ ಪ್ರಸಾದ್ ನೇತ್ರಾಲಯದ  ಉಚಿತ ನೇತ್ರ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವು ಅ.29ರಂದು ಬೆಳಿಗ್ಗೆ 9.30ರಿಂದ ಗೋವಿಂದೂರು ಸ.ಉ.ಪ್ರಾ. ಶಾಲೆಯಲ್ಲಿ ನಡೆಯಲಿದೆ ಎಂದು ಗೋವಿಂದೂರು ರಾಜಕೇಸರಿ ಇದರ ಸ್ಥಾಪಕಾಧ್ಯಕ್ಷ ದೀಪಕ್ ಜಿ. ಹೇಳಿದರು. ಅ.25ರಂದು ಬೆಳ್ತಂಗಡಿಯ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಉಡುಪಿ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗ ದಲ್ಲಿ ಈ ಶಿಬಿರ ಜರಗಲಿದೆ. ಕುದ್ರೋಳಿ ನಾರಾಯಣಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದು, ಗೋವಿಂದೂರು ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಸುಮಿತ್ರಾ ಎಂ.ವೈ. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಹಾಗೂ ಅತಿಥಿ ಗಣ್ಯರು ಸಮಾರಂಭದಲ್ಲಿ ಭಾಗವಹಿಸ ಲಿದ್ದಾರೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜಕೇಸರಿ ಅಧ್ಯಕ್ಷ ದಿನೇಶ್ ಪೂಜಾರಿ, ಕಾರ್ಯದರ್ಶಿ ಸುನಿಲ್ ಶೆಟ್ಟಿ ನಾಳ, ಅರ್ಪನ್ ಶೆಟ್ಟಿ ಹಾಗೂ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.