ಬೆಳ್ತಂಗಡಿ : ಗೌಡರ ಕ್ರೀಡೋತ್ಸವ

Advt_NewsUnder_1
Advt_NewsUnder_1

gowdara kridosothava

gowdara kridosothava1ಬೆಳ್ತಂಗಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಹಾಗೂ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಬೆಳ್ತಂಗಡಿ ಇವುಗಳ ಸಹಭಾಗಿತ್ವದಲ್ಲಿ ಗೌಡರ ಕ್ರೀಡೋತ್ಸವವು ನ. 5ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡೋತ್ಸವದ ಉದ್ಘಾಟನೆಯನ್ನು ಮಂಗಳೂರು ನಿವೃತ್ತ ಉಪ ಅರಣ್ಯ ಸಂರಕ್ಷಣಾಧಿಕಾರಿ ಪದ್ಮನಾಭ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ. ಸೋಮೇ ಗೌಡ ವಹಿಸಿದ್ದರು. ಆಹಾರ ಮೇಳದ ಉದ್ಘಾಟನೆಯನ್ನು ಮಂಗಳೂರು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಮಂಗಳೂರು ಬಿ.ಜಿ.ಎಸ್ ಸೌಹಾರ್ದ ಸಹಕಾರಿ ನಿಯಮಿತ ಅಧ್ಯಕ್ಷ ಲೋಕಯ್ಯ ಗೌಡ ಕೆ., ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಚಂದ್ರಕಾಂತ್ ಕೆ.ಎಲ್., ಮಂಗಳೂರು ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಉಪಾಧ್ಯಕ್ಷ ಆನಂದ ಗೌಡ ಪಿ.ಎಚ್., ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್. ಪದ್ಮ ಗೌಡ, ಬೆಳ್ತಂಗಡಿ ತಾ.ಪಂ ಮಾಜಿ ಅಧ್ಯಕ್ಷ ಜತ್ತಣ್ಣ ಗೌಡ ಬೆಳಾಲು, ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸದಸ್ಯೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ಭಾಗವಹಿಸಿದ್ದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬೇಗೂರು ಶ್ರೀ ನಾಗನಾಥೇಶ್ವರ ದೇವಸ್ಥಾನದ ಧರ್ಮದರ್ಶಿ ನಾರಾಯಣ ಗೌಡ ಬೇಗೂರು, ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ದೇವಸ್ಯ, ಸೋಮಂತಡ್ಕ ಪಂಚಶ್ರೀ ಗ್ರೂಪ್ಸ್‌ನ ಮಾಲಕ ನಾರಾಯಣ ಗೌಡ ಕೊಳಂಬೆ, ವಕೀಲ ಗೋಪಾಲಕೃಷ್ಣ ಬಿ. ಗುಲ್ಲೋಡಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕಾರ್ಯದರ್ಶಿ ಮೋಹನ ಗೌಡ, ಯುವ ವೇದಿಕೆ ಅಧ್ಯಕ್ಷ ಜಯಾನಂದ ಗೌಡ ತೋಟ, ಕಾರ್ಯದರ್ಶಿ ಸುರೇಶ್ ಗೌಡ ಕೌಡಂಗೆ, ಮಹಿಳಾ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಉಷಾ ಲಕ್ಷ್ಮಣ ಗೌಡ, ಕಾರ್ಯದರ್ಶಿ ಶ್ರೀಮತಿ ಉಮಾವತಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.