ಮಚ್ಚಿನ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ

machina hospital udhgatane 1ಮಚ್ಚಿನ : ದ.ಕ. ಜಿ.ಪಂ. ಮಂಗಳೂರು, ತಾ.ಪಂ. ಬೆಳ್ತಂಗಡಿ, ತಾಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಮಚ್ಚಿನ ಗ್ರಾಮಕ್ಕೆ ಸರಕಾರ ಮಂಜೂರುಗೊಳಿಸಿದ ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಇದರ ಉದ್ಘಾಟನೆಯು ನ.8ರಂದು ಇಲ್ಲಿಯ ಗ್ರಾಮ ಪಂಚಾಯತು ಕಟ್ಟಡದಲ್ಲಿ ಜರುಗಿತು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಕೆ.ವಸಂತ ಬಂಗೇರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಚ್ಚಿನ ಗ್ರಾಮಕ್ಕೆ ಆರೋಗ್ಯ ಕೇಂದ್ರ ಬೇಕು ಎಂಬುದು ಈ
ಭಾಗದ ಜನರ ಕೆಲ ವರ್ಷಗಳ ಬೇಡಿಕೆ. ಮಚ್ಚಿನ ಗ್ರಾಮಸ್ಥರು ಸುಬ್ಬಯ್ಯ ಶೆಟ್ಟಿಯವರ ನೇತೃತ್ವದಲ್ಲಿ ಊರಿಗೆ ಆಸ್ಪತ್ರೆಗಾಗಿ ಶ್ರಮಿಸಿ ರೂ.1 ಲಕ್ಷ ಸಂಗ್ರಹಿಸಿ ಕಟ್ಟಿದ್ದರಿಂದ ಈಗ ಆಸ್ಪತ್ರೆ ಬರುವಂತಾಯಿತು. ಈ ಆಸ್ಪತ್ರೆಯಲ್ಲಿ ಬಡವರಿಗೆ ಉತ್ತಮ ಸೇವೆ ದೊರೆಯಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಹೇಗೆ ಸೇವೆ ದೊರೆಯುತ್ತದೋ ಅದೇ ರೀತಿ ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಸೇವೆ ದೊರೆಯಬೇಕು. ಬಡವರ ಬಗ್ಗೆ ಕಾಳಜಿ ವಹಿಸಿ, ವೈದ್ಯರು ಹಾಗೂ ಸಿಬ್ಬಂದಿಗಳು ನಿಷ್ಠೆಯಿಂದ ಕರ್ತವ್ಯವನ್ನು ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿ ಮಚ್ಚಿನ ಸರಕಾರಿ ಆಸ್ಪತ್ರೆಯಲ್ಲಿ ಇತರ ಆಸ್ಪತ್ರೆಗಳಲ್ಲಿ ಸಿಗುವಂತಹ ಎಲ್ಲಾ ಸೌಲಭ್ಯಗಳು ಲಭ್ಯವಾಗಲಿದ್ದು, ಇದರ ಪ್ರಯೋಜನವನ್ನು ರೋಗಿಗಳು ಪಡೆದುಕೊಳ್ಳುವಂತೆ ವಿನಂತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಹರ್ಷಲತಾ ವಹಿಸಿ, ಶುಭ ಕೋರಿದರು. ಮುಖ್ಯ ಅತಿಥಿಗಳಾಗಿ ತಾ.ಪಂ. ಅಧ್ಯಕ್ಷೆ ದಿವ್ಯ ಜ್ಯೋತಿ, ದ.ಕ. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್, ತಾ.ಪಂ. ಉಪಾಧ್ಯಕ್ಷೆ ವೇದಾವತಿ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ತಾ.ಪಂ. ಸದಸ್ಯೆ ಶ್ರೀಮತಿ ವಸಂತಿ, ಲಕ್ಷ್ಮಣ್ ಕುಲಾಲ್, ಮಚ್ಚಿನ ಗ್ರಾ.ಪಂ. ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಬಸವರಾಜ್ ಕೆ. ಅಯ್ಯಣನವರ್ ಭಾಗವಹಿಸಿ ಶುಭ ಹಾರೈಸಿದರು.
ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಸ್ಥಳೀಯ ಗಣ್ಯರಾದ ಸುಬ್ಬಯ್ಯ ಶೆಟ್ಟಿ ಕೋರಬೆಟ್ಟು ಸೇರಿದಂತೆ ನಾಗರಿಕರು, ಪಂಚಾಯತು ಸದಸ್ಯರು, ಆರೋಗ್ಯ ಕೇಂದ್ರ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸರ್ವಸದಸ್ಯರು ಉಪಸ್ಥಿತರಿದ್ದರು. ಮಚ್ಚಿನ ಗ್ರಾ.ಪಂ. ಉಪಾಧ್ಯಕ್ಷ ಚಂದ್ರಶೇಖರ್ ಬಿ.ಎಸ್. ಸ್ವಾಗತಿಸಿದರು. ಲೋಲಾಕ್ಷಿ ಕಾರ್ಯಕ್ರಮ ನಿರೂಪಿಸಿ, ಅಜೇಯ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.