ಶ್ರೀ ಗುರುದೇವ ಹಳೆವಿದ್ಯಾರ್ಥಿ ಸಂಘ ಉದ್ಘಾಟನೆ ಡಿಸೆಂಬರ್‌ನಲ್ಲಿ ಮುಖ್ಯಮಂತ್ರಿಗಳಿಂದ ನವೀಕೃತ ಕಾಲೇಜು ಕಟ್ಟಡ ಉದ್ಘಾಟನೆ : ಬಂಗೇರ

gurudeva halevidyarthi sangaಬೆಳ್ತಂಗಡಿ : ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಅಭಿವೃದ್ದಿಗೊಳಿಸುವ ಉದ್ದೇಶದಿಂದ ಕಳೆದ 12ವರ್ಷದ ಹಿಂದೆ ಶ್ರೀ ಗುರುದೇವ ಶಿಕ್ಷಣ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಸುಮಾರು 2250 ವಿದ್ಯಾರ್ಥಿಗಳು ಈವರೆಗೆ ಈ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪೂರೈಸಿ ಸಮಾಜದ ಉನ್ನತ ಸ್ಥಾನ ಗಳಿಸಿದ್ದಾರೆ. ಈ ವರೆಗೆ ಹಳೇ ಕಟ್ಟಡದಲ್ಲೇ ತರಗತಿಗಳು ನಡೆಯುತ್ತಿದ್ದು, ಹೊಸ ಕಟ್ಟಡ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಇದರ ಉದ್ಘಾಟನೆಯನ್ನು ಕೆಲವೇ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ ಎಂದು ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಶಾಸಕ ವಸಂತ ಬಂಗೇರ ಹೇಳಿದರು.
ಅವರು ನ.5 ರಂದು ಬೆಳ್ತಂಗಡಿ ಶ್ರೀ ನಾರಾಯಣಗುರು ಸಭಾ ಭವನದಲ್ಲಿ ನಡೆದ ಗುರುದೇವ ಕಾಲೇಜಿನಲ್ಲಿ ಹಳೆವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭದಲ್ಲಿ ಹಳೆವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾತನಾಡಿದರು.
ಅಕ್ಷರಸ್ಥ ಸಮಾಜ ನಿರ್ಮಾಣಕ್ಕೆ ಹಾಗೂ ಬಡ, ಹಿಂದುಳಿದ ವರ್ಗಗಳ ಜನರನ್ನು ಶೈಕ್ಷಣಿಕವಾಗಿ ಅಭಿವೃದ್ದಿಗೊಳಿಸುವ ಉದ್ದೇಶದಿಂದ ಶ್ರೀ ಗುರುದೇವ ಶಿಕ್ಷಣ ಸಂಸ್ಥೆ ಕಳೆದ 12 ವರ್ಷಗಳಿಂದ ಶಕ್ತಿ ಮೀರಿ ಶ್ರಮಿಸಿದೆ. ಇಲ್ಲಿನ ಹಳೆ ವಿದ್ಯಾರ್ಥಿಗಳನ್ನು ಒಗ್ಗೂಡಿಸಿ ಸಂಸ್ಥೆಗೆ ಹೊಸ ಶಕ್ತಿ ತುಂಬುವ ಪ್ರಯತ್ನದಲ್ಲಿ ಹಳೆವಿದ್ಯಾರ್ಥಿ ಸಂಘ ರಚಿಸಲಾಗಿದೆ. ರಾಜ್ಯದ ಯಾವ ಶಿಕ್ಷಣ ಸಂಸ್ಥೆಯೂ ನೀಡದ ಅತೀ ಕಡಿಮೆ ವೆಚ್ಚದಲ್ಲಿ ಇಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, ಆರ್ಥಿಕ ತೊಂದರೆಯಿಂದ ಮುಂಚ್ಚುವ ಹಂತಕ್ಕೂ ತಲುಪಿತ್ತು. ದೇವರ ಆಶ್ರೀರ್ವಾದ ಹಾಗೂ ಸಿಬ್ಬಂದಿಗಳ ಸಹಕಾರದಿಂದ ಶಕ್ತಿಮೀರಿ ಸಮಾಜದ ಶಿಕ್ಷಣ ಸೇವೆಯನ್ನು ಈ ಸಂಸ್ಥೆ ನಡೆಯುತ್ತಿದೆ. ಸಂಸ್ಥೆಯ ಬೆಳವಣಿಗೆ ಗುರುದೇವ ಕಾಲೇಜಿನಲ್ಲಿ ಹಳೆವಿದ್ಯಾರ್ಥಿಗಳ ನೈತಿಕ ಬಲ ಅಗತ್ಯವಾಗಿದೆ ಎಂದರು.
ಗುರುದೇವ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ ಮಾತನಾಡಿ, 2006ರಲ್ಲಿ ಆರಂಭವಾದ ಗುರುದೇವ ಕಾಲೇಜು ತನ್ನ ಹಳೇ ಕಟ್ಟಡದಲ್ಲೇ ಕಳೆದ 12ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ. ಸುಮಾರು 6.5 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, 3 ಕೋಟಿ ರೂ ವೆಚ್ಚದ ಮೊದಲ ಹಂತದ ಕಟ್ಟಡ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಹೊಸ ಕಟ್ಟಡದಲ್ಲಿ ತರಗತಿ ನಡೆಯಲಿದೆ. ಇಂದು ಶಿಕ್ಷಣ ಸಂಸ್ಥೆ ಬೆಳೆಯಲು ಅದರ ಹಳೆ ವಿದ್ಯಾರ್ಥಿಗಳ ಸಹಕಾರ ಅತ್ಯಗತ್ಯ. ಈ ನಿಟ್ಟಿನಲ್ಲಿ ಹಿರಿಯ ವಿದ್ಯಾರ್ಥಿಗಳನ್ನು ಒಗ್ಗೂಡಿಸುವ ಕಾರ್ಯ ನಡೆಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಳೆವಿದ್ಯಾರ್ಥಿ ಸಂಘದ ಮಾರ್ಗದರ್ಶಕ ಉಪನ್ಯಾಸಕ ಸಮಿಯುಲ್ಲಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿಗಳ ಸಂಘ ರಚಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.