ಧರ್ಮಸ್ಥಳ ಲಕ್ಷ ದೀಪೋತ್ಸವ ಪ್ರಾರಂಭ

laxsha deepa1

laxsha deepa2

Laxsha deepa3

laxsha deepa

laxsha deepa4ಉಜಿರೆ : ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ನ. 13ರಂದು ಪ್ರಾರಂಭಗೊಂಡಿತು. ಉಜಿರೆಯಿಂದ ಧರ್ಮಸ್ಥಳಕ್ಕೆ ಹತ್ತುಸಾವಿರ ಮಂದಿ ಪಾದಯಾತ್ರೆಯಲ್ಲಿ ಭಕ್ತರು ಆಗಮಿಸಿದ್ದರು.
ಬದುಕನ್ನು ಪ್ರೀತಿಸಿ, ಹೃದಯ ಶ್ರೀಮಂತಿಕೆಯೊಂದಿಗೆ ಉತ್ತಮ ಆಚಾರ-ವಿಚಾರ, ಸಾತ್ವಿಕತೆ, ಪ್ರೀತಿ-ವಿಶ್ವಾಸ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಬೇಕು. ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆದು ಸಜ್ಜನರಾಗಿ ಸಾರ್ಥಕ ಬದುಕನ್ನು ನಡೆಸಬೇಕು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಜಿರೆಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಭಕ್ತರು ಮತ್ತು ಅಭಿಮಾನಿಗಳನ್ನು ಉದ್ದೇಶಿಸಿ ಅಮೃತವರ್ಷಿಣಿ ಸಭಾಭವನದಲ್ಲಿ ಅವರು ಮಾತನಾಡಿದರು. ಸರ್ವರ ವತಿಯಿಂದ ಹೆಗ್ಗಡೆಯವರನ್ನು ಗೌರವಿಸಿ ಸನ್ಮಾನಿಸಲಾಯಿತು
ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು. ವಿಜಯರಾಘವ ಪಡ್ವೆಟ್ನಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ವಕೀಲ ಪ್ರತಾಪಸಿಂಹ ನಾಯಕ್ ಸ್ವಾಗತಿಸಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.